WhatsApp Group
Join Now
ಬೆಳಗಾವಿ: ಸಾರ್ವಜನಿಕ ಗಣೇಶೋತ್ಸವವನ್ನು ಸುಗಮವಾಗಿ ಆಚರಿಸಲು ತಾಲೂಕು, ಗ್ರಾಮೀಣ, ನಗರ ಪೊಲೀಸ್ ಪಡೆಗಳು ವ್ಯಾಪಕ ಬಂದೋಬಸ್ತ್ ಕೈಗೊಂಡಿವೆ. ಆದರೆ ಎರಡು ಬಣಗಳ ನಡುವೆ ಮಾರಾಮಾರಿ, ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದ ಖಾನಾಪುರ ಗ್ರಾಮದಲ್ಲಿ ಗುರುವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಖಾನಾಪುರ ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯದಿಂದ ಎರಡು ಕಡೆಯವರು ಕಲ್ಲು ತೂರಾಟ ನಡೆಸಿದರು.ಗುರುವಾರ ರಾತ್ರಿ ಎರಡು ಯುವ ಗುಂಪುಗಳು ಹೊಡೆದಾಡಿಕೊಂಡಿದ್ದು, ಶುಕ್ರವಾರ ಶಾಸಕ ವಿಠ್ಠಲ್ ಹಲಗೇಕರ್ ಅವರು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಲು ಸಂಧಾನ ಸಭೆ ನಡೆಸಿದರು. ಈ ಸಂದರ್ಭ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಒಂದು ಗುಂಪಿನ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಖಾನಾಪುರ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಆಗಮಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
0 ಕಾಮೆಂಟ್‌ಗಳು