ಸೋಮವಾರಪೇಟೆ ರಾಜ್ಯ ಸರ್ಕಾರದ ಮದ್ಯ ಮಾರಾಟ ನೀತಿಯನ್ನು ತೀವ್ರವಾಗಿ ಖಂಡಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ಆರಂಭಿಸಲು ಸರಕಾರದಿಂದ ಅನುಮತಿ ನೀಡಲಾಗುತ್ತಿದೆ. ಹೀಗೆ ಮಾಡುವುದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಗ್ರಾಮೀಣ ಭಾಗದ ಯುವಕರು ವ್ಯಸನಕ್ಕೆ ಸಿಲುಕಿ ಯುವ ಪೀಳಿಗೆ ಹಾಳಾಗುತ್ತದೆ. ಒಂದೆಡೆ ಸರಕಾರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿ ನೆರವಾಗುತ್ತಿದ್ದರೆ, ಗ್ರಾಮೀಣ ಭಾಗದಲ್ಲಿ ಮದ್ಯದಂಗಡಿ ತೆರೆದು ಜನತೆ ವ್ಯಸನದ ಪ್ರಪಾತಕ್ಕೆ ಬೀಳುತ್ತಿದ್ದಾರೆ.
ರಾಜ್ಯ ಸರಕಾರ ಯಾವುದೇ ಸಂದರ್ಭದಲ್ಲೂ ಮದ್ಯದಂಗಡಿಗೆ ಅವಕಾಶ ನೀಡಬಾರದು, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘ ಎಚ್ಚರಿಸಿದೆ. ವ್ಯಸನದಿಂದಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಮಹಿಳೆಯರು ವಿಧವೆಯರಾಗಿದ್ದಾರೆ. ಕುಟುಂಬದ ಅನ್ನದಾತನ ವ್ಯಸನದಿಂದ ಮಕ್ಕಳ ವಿದ್ಯಾಭ್ಯಾಸ ಹದಗೆಟ್ಟಿದೆ. ಕುಟುಂಬ ಮತ್ತು ಸಮುದಾಯದ ಶಾಂತಿ ಮಾಯವಾಗಿದೆ. ಮಾದಕ ವ್ಯಸನ ಹೆಚ್ಚುತ್ತಿರುವಾಗ ಗ್ರಾಮ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಸರಕಾರ ಮುಂದಾಗಿರುವುದು ಸಮಾಜಕ್ಕೆ ಧಕ್ಕೆ ತಂದಿದೆ. ಈ ನಿರ್ಧಾರವನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ರಾಜ್ಯಾದ್ಯಂತ ಮಹಿಳಾ ಸಂಘಟನೆಗಳಿಂದ ತೀವ್ರ ಆಂದೋಲನ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯ ನಾನಾ ತಾಲೂಕುಗಳ ಮಹಿಳೆಯರು ರಾಜ್ಯ ಸರಕಾರದ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
0 ಕಾಮೆಂಟ್‌ಗಳು