Hot Posts

6/recent/ticker-posts

ಬೆಳಗಾವಿ: ವಿದ್ಯುತ್ ಸ್ಪರ್ಶದಿಂದ ತಂದೆ-ಮಗ ಸಾವು.

ಬೆಳಗಾವಿ :ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಮಲ್ಲಿಕಾರ್ಜುನ ಪೂಜಾರಿ (32) ಮತ್ತು ಮಗ ಪ್ರೀತಮ್ (7) ಮೃತರು.
ಬಾಲಕ ಪ್ರೀತಮ್ ನನ್ನು ತಂದೆ ಮಲ್ಲಿಕಾರ್ಜುನ ತೋಟಕ್ಕೆ ಕರೆದುಕೊಂಡು ಹೋಗಿದ್ದರು. ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ. ಇದನ್ನು ಕಂಡ ಮಗ ಅಪಘಾತದಿಂದ ಪಾರಾಗಲು ತಂದೆಯ ಕೈ ಹಿಡಿದಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು