ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ. ಮಾರ್ಕೆಟ್ ಎಸಿಪಿ ಎನ್.ವಿ. ಭರಮಣಿ, ಐಜಿಪಿ ಕಚೇರಿ ಡಿವೈಎಸ್ಪಿ ಮಹಾಂತೇಶ್ವರ ಜಿದ್ದಿ, ರಾಮದುರ್ಗ ಉಪವಿಭಾಗದ ಡಿಎಸ್ಪಿ ರಾಮನಗೌಡ ಹಟ್ಟಿ.
ಮಾರ್ಕೆಟ್ ಎಸಿಪಿ ನಾರಾಯಣ ಭರಮಣಿ ಅವರನ್ನು ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಮಹಾಂತೇಶ್ವರ ಜಿಡ್ಡಿ ಅವರನ್ನು ಬಾಗಲಕೋಟೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ರಾಮನಗೌಡ ಹಟ್ಟಿ ಅವರನ್ನು ಬಿಜಾಪುರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಮೂವರು ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
0 ಕಾಮೆಂಟ್‌ಗಳು