ಬೆಳಗಾವಿ : ಉತ್ತರ ಕರ್ನಾಟಕದಲ್ಲಿ ಭಾರೀ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಆರ್ಥಿಕತೆಯನ್ನು ಉತ್ತೇಜಿಸಲು ಬೆಳಗಾವಿ ಬಳಿ 2000 ಎಕರೆ ಜಾಗದಲ್ಲಿ ಹೊಸ ಕೈಗಾರಿಕಾ ವಸಾಹತು, 500 ಎಕರೆ ಭೂಮಿಯಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪಿಸಲಾಗುವುದು. ಅಲ್ಲದೇ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದರು.
ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು ಮತ್ತು ಬರಗಾಲದ ಕುರಿತು ಚರ್ಚಿಸಲು ರಾಜ್ಯ ಸರ್ಕಾರವು ಬೆಳಗಾವಿಯ ಸುವರ್ಣ ಸೌಧದಲ್ಲಿ ಈ ವರ್ಷದ ಚಳಿಗಾಲದ ಅಧಿವೇಶನವನ್ನು ನಡೆಸಿತು. ಹತ್ತು ದಿನಗಳ ಕೆಲಸದಲ್ಲಿ ಎರಡು ದಿನ 'ಉತ್ತರ ಕರ್ನಾಟಕ'ಕ್ಕೆ ಮೀಸಲಾಗಿತ್ತು. ಆದರೆ, ನಾಲ್ಕು ದಿನ ಚರ್ಚೆ ನಡೆದಿದೆ. 42 ಶಾಸಕರು 11 ಗಂಟೆ 4 ನಿಮಿಷಗಳ ಕಾಲ ಚರ್ಚಿಸಿ ಉತ್ತರ ಕರ್ನಾಟಕದ ಸಮಸ್ಯೆಗಳು, ಯೋಜನೆಗಳು ಮತ್ತು ಬೇಡಿಕೆಗಳ ಬಗ್ಗೆ ಪ್ರಶ್ನೆಗಳನ್ನು ಮುಂದಿಟ್ಟು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಮುಖ್ಯಮಂತ್ರಿಗಳು ಉತ್ತರಿಸಿದರು. ಅದರಲ್ಲಿ ಬೆಳಗಾವಿ ಜತೆಗೆ ಧಾರವಾಡ, ಬಿಜಾಪುರ, ರಾಯಚೂರು ಜಿಲ್ಲೆಗಳಲ್ಲಿ ಕೈಗಾರಿಕೆ, ಉದ್ಯೋಗದ ಬೆಳವಣಿಗೆಗೆ ಅನುಗುಣವಾಗಿ ಭರವಸೆ ನೀಡಿದರು.
ಬೆಳಗಾವಿ ಬಳಿ 2000 ಎಕರೆ ಜಾಗದಲ್ಲಿ ಕೈಗಾರಿಕಾ ವಸಾಹತು ನಿರ್ಮಾಣದ ಜತೆಗೆ 500 ಎಕರೆ ಜಾಗದಲ್ಲಿ ಫೌಂಡ್ರಿ ಕ್ಲಸ್ಟರ್ ರಚಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅಲ್ಲದೇ ಹತ್ತರಗಿ ಬಳಿ ಏರೋಸ್ಪೇಸ್ ಉದ್ಯಮ ವಿಸ್ತರಣೆ ವಿಚಾರವನ್ನು ಪರಿಗಣಿಸಿ ಕೈಗಾರಿಕಾ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು.
0 ಕಾಮೆಂಟ್‌ಗಳು