Hot Posts

6/recent/ticker-posts

ಬೆಳಗಾವಿ: 50 ಕೋಟಿ ಮೀಸಲು - ಸಚಿವ ಸತೀಶ ಜಾರಕಿಹೊಳಿ: ರಾಮತೀರ್ಥ ನಗರದಲ್ಲಿ 9 ಎಕರೆ 20 ಗುಂಟಾಗಳಲ್ಲಿ ಸುಸಜ್ಜಿತ ಜಿಲ್ಲಾ ಆಟದ ಮೈದಾನ.

 ಬೆಳಗಾವಿ-: ರಾಮತೀರ್ಥನಗರದಲ್ಲಿ 9 ಎಕರೆ 20 ಗುಂಟಾ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಆಟದ ಮೈದಾನ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು. ಈ ಉದ್ದೇಶಕ್ಕಾಗಿ ನಿರ್ಮಾಣ ಇಲಾಖೆಯಿಂದ 50 ಕೋಟಿ ನಿಧಿಯನ್ನು ಕಾಯ್ದಿರಿಸಲಾಗಿದೆ. ಪ್ರಸ್ತುತ 10 ಕೋಟಿ ಅನುದಾನ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ರಾಜು ಸೇಠ್, ಕ್ರೀಡಾ ಸಚಿವ ಬಿ. ನಾಗೇಂದ್ರ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿ ನೀಡಲಾಗಿದೆ. ನಗರದ ರಾಮತೀರ್ಥ ನಗರದಲ್ಲಿ 9 ಎಕರೆ 20 ಗುಂಟಾ ಪ್ರದೇಶದಲ್ಲಿ ಈ ಮೈದಾನ ನಿರ್ಮಾಣವಾಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 6 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುವುದು. ಹೀಗೆ ಒಟ್ಟು 15 ಎಕರೆ ಪ್ರದೇಶದಲ್ಲಿ ಮೈದಾನ ನಿರ್ಮಾಣವಾಗಲಿದೆ. ಇದರಲ್ಲಿ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುವುದು. ಶೀಘ್ರದಲ್ಲೇ ಆಟದ ಮೈದಾನ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ನಗರದಲ್ಲಿ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕ್ಷೇತ್ರದ ಅವಶ್ಯಕತೆ ಇದೆ ಎಂದು ಕ್ರೀಡಾ ಸಚಿವ ಬಿ. ನಾಗೇಂದ್ರ ಅವರಿಗೆ ನೀಡಿದರು. ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದ ಅವರು, ಕ್ರೀಡಾ ಮೈದಾನ ನಿರ್ಮಾಣಕ್ಕೆ ಬೇಕಾದ ಅಗತ್ಯತೆಗಳನ್ನು ಪೂರೈಸಲು ಯಾವುದೇ ರೀತಿಯಲ್ಲಿ ಸಹಕಾರ ನೀಡಲಾಗುವುದು ಎಂದರು. ಇದರೊಂದಿಗೆ ಕ್ರೀಡಾ ಇಲಾಖೆಯಿಂದ ಕ್ಷೇತ್ರಕ್ಕೆ ಅನುದಾನ ಮಂಜೂರು ಮಾಡುವುದಾಗಿ ಕ್ರೀಡಾ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಾಜು ಸೇಠ್ ಕೂಡ ಮೈದಾನದ ಅಗತ್ಯವಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಮಂಜುನಾಥ್, ಆಯುಕ್ತ ಶಶಿಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು