Hot Posts

6/recent/ticker-posts

ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ 7 ಮಂದಿಗೆ ಗಾಯ.

 

ಬೆಳಗಾವಿ-ಗೋಕಾಕ: ಶನಿವಾರ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಒಂಬತ್ತು ತಿಂಗಳ ಮಗು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸಿಕ್ಕಿರುವ ಮಾಹಿತಿ ಏನೆಂದರೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಊಟವಾದ ನಂತರ ಎಲ್ಲರೂ ಮಲಗಲು ಹೋದರು. ಅಡುಗೆಗೆ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ವಾಸನೆ ಬರುತ್ತಿದ್ದುದನ್ನು ಗಮನಿಸಿದ ಮನೆಯವರು ತಕ್ಷಣ ಎದ್ದು ಮೊಬೈಲ್ ಟಾರ್ಚ್ ತೆರೆದರು. ಆ ಟಾರ್ಚ್ ಬೆಳಕಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ.

ನಿರ್ವಾಣಿ ಕುಟುಂಬದ ಒಂಬತ್ತು ತಿಂಗಳ ಮಗು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳು ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಗ್ಯಾಸ್ ವಾಸನೆ ಬಂದಿದ್ದರಿಂದ ಮೊಬೈಲ್ ಟಾರ್ಚ್ ಆನ್ ಮಾಡಿದಾಗ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದಿಂದ ಮನೆಯಲ್ಲಿದ್ದ ಸಾಮಗ್ರಿಗಳಿಗೂ ಹಾನಿಯಾಗಿದೆ. ಘಟನೆ ಸಂಬಂಧ ಅಂಕಲಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು