Hot Posts

6/recent/ticker-posts

ಬೆಳಗಾವಿ: ಮನೆಯ ಗೋಡೆ ಕುಸಿದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾದಲ್ ಅಂಕಲೆಗಿ ಗ್ರಾಮದಲ್ಲಿ ಹಳೆಯ ಮನೆಯ ಗೋಡೆ ಕುಸಿದು ಚನ್ನಪ್ಪ ಕುರಬಾರ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸ್ಥಳಕ್ಕೆ ಧಾವಿಸಿ ಘಟನೆಯ ಸಂಪೂರ್ಣ ಮಾಹಿತಿ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸರಕಾರದಿಂದ ಪರಿಹಾರ ನೀಡುವುದಾಗಿ ಶಾಸಕರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಬಸವರಾಜ ನಾಗರಾಳ್, ಹಿರೇಬಾಗೇವಾಡಿ ಸಿಪಿಐ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು