ಬೆಳಗಾವಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಶುಕ್ರವಾರ (ಜು.19) ಹಾಗೂ ಶನಿವಾರ 2 ದಿನ ರಜೆ ಘೋಷಿಸಲಾಗಿದೆ. ಇದರಲ್ಲಿ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ, ಪ್ರೌಢಶಾಲೆಗಳು ಸೇರಿದ್ದು, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಖಾನಾಪುರದ ಶಾಲೆಗಳಿಗೆ ಮಾತ್ರ ಸತತ ಎರಡು ದಿನ ಹಾಗೂ ಭಾನುವಾರ ಮೂರು ದಿನ ರಜೆ ಸಿಗಲಿದೆ.
ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಖಾನಾಪುರ ತಾಲೂಕಿನ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಭಾರೀ ಮಳೆಯಿಂದ ತುರ್ತು ಪರಿಸ್ಥಿತಿ ಎದುರಾದರೆ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ರಜೆ ನೀಡಲಾಗಿದೆ.
ಬೆಳಗಾವಿ ನಗರ ಸೇರಿದಂತೆ ಬೆಳಗಾವಿ ತಾಲೂಕಿನ ಶಾಲೆಗಳಿಗೆ ರಜೆ ಇಲ್ಲ. ಶಾಲೆಗಳು ಮುಂದುವರಿಯಲಿವೆ.
0 ಕಾಮೆಂಟ್‌ಗಳು