![]() |
ಬೆಳಗಾವಿ: ಗೋಕಾಕ ತಾಲೂಕಿನಲ್ಲಿ ಶಾಲಾ ವಾಹನವೊಂದು ಭೀಕರ ಅಪಘಾತಕ್ಕೀಡಾಗಿದೆ. ಬಸ್ ಪಲ್ಟಿಯಾಗಿ 6 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನ ಸ್ಟೇರಿಂಗ್ ಲಾಕ್‌ನಿಂದ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಗೋಕಾಕ-ಪಾಚ್ಚಾಪುರ ರಸ್ತೆಯ ಮೇಳಿಮುರಡಿ ಕ್ರಾಸ್‌ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಗ್ರಾಮಗಳ ವಿದ್ಯಾರ್ಥಿಗಳನ್ನು ಹೊತ್ತ ಶಾಲಾ ಬಸ್ ಮರಡಿಮಠ ಗ್ರಾಮದ ಕಡೆಗೆ ಹೋಗುತ್ತಿತ್ತು. ಬಸ್ ನ ಸ್ಟೇರಿಂಗ್ ಲಾಕ್ ನಿಂದಾಗಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಬಸ್ ಪಲ್ಟಿಯಾದಾಗ ವಿದ್ಯಾರ್ಥಿಗಳು ಗಾಬರಿಗೊಂಡು ಒಂದೇ ಸಮನೆ ಅಳಲು ತೋಡಿಕೊಂಡರು. ಅಪಘಾತ ಸಂಭವಿಸಿದ ತಕ್ಷಣ ಸುತ್ತಮುತ್ತಲಿನ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಸಹಾಯಕ್ಕೆ ಧಾವಿಸಿ ಗಾಯಗೊಂಡ ವಿದ್ಯಾರ್ಥಿಗಳನ್ನು ಬಸ್‌ನಿಂದ ಹೊರತೆಗೆದು ಧೈರ್ಯ ತುಂಬಿದರು.
ಅಷ್ಟರಲ್ಲಿ ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಪಲ್ಟಿಯಾದಾಗ ಎಲ್ಲ ವಿದ್ಯಾರ್ಥಿಗಳು ಭಯಗೊಂಡರು. ಆದರೆ ತಕ್ಷಣವೇ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ಹೇಗೆ ಸಂಭವಿಸಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಸ್ ಪಲ್ಟಿಯಾದಾಗ ಅದರಲ್ಲಿ ಎಷ್ಟು ವಿದ್ಯಾರ್ಥಿಗಳು ಇದ್ದರು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಹಾಗೂ ವಿದ್ಯಾರ್ಥಿಗಳ ಪೋಷಕರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಆದ್ಯತೆ ನೀಡಲಾಗಿದ್ದು, ನಂತರ ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
0 ಕಾಮೆಂಟ್‌ಗಳು