ಬೆಳಗಾವಿ: ಮೂಡಲಗಿ: ಯುವಕನಿಗೆ ಹರಿತವಾದ ಆಯುಧದಿಂದ ಇರಿದಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ನಡೆದಿದೆ. ಮೃತರನ್ನು ಯಾಸಿನ್ ಮೊಮಿನ್ (28, ಲಕ್ಷ್ಮೇಶ್ವರ ನಿವಾಸಿ) ಎಂದು ಗುರುತಿಸಲಾಗಿದೆ. ಯಾಸಿನ್ ಮೊಮಿನ್ ಮೇಲೆ ವ್ಯಕ್ತಿಯೊಬ್ಬ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.
ಆರೋಪಿಗಳು ಮುಂಜಾನೆ ಏಕಾಏಕಿ ಯಾಸಿನ್ ಮೊಮಿನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಹರಿತವಾದ ಆಯುಧದಿಂದ ಯುವಕನನ್ನು ಹತ್ಯೆಗೈದಿರುವುದಾಗಿ ವರದಿಯಾಗಿದೆ. ಮೃತ ಯಾಸಿನ್ ಮೋಮಿನ್ ಆರೋಪಿಯ ಪತ್ನಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರಿಂದ ಕೋಪಗೊಂಡ ಆರೋಪಿ ಯಾಸಿನ್ ಮೋಮಿನ್ ಹಾಗೂ ಆತನ ಪತ್ನಿ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಯಾಸಿನ್ ಮೋಮಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆಯಿಂದ ಲಕ್ಷ್ಮೇಶ್ವರ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳೀಯ ಮಾಹಿತಿ ಮೇರೆಗೆ ಕುಲಗೋಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
0 ಕಾಮೆಂಟ್‌ಗಳು