ಬೆಳಗಾವಿ : ಅಥಣಿ : ಜಗಳದಿಂದ ಸಹೋದರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ (ಸೋಮವಾರ) ನಡೆದಿದೆ. ಮೃತ ಸಹೋದರರನ್ನು ಹನ್ಮಂತ್ ರಾಮಚಂದ್ರ ಖೋಟ್ (35) ಮತ್ತು ಖಂಡೋಬಾ ತಾನಾಜಿ ಖೋಟ್ (30) ಎಂದು ಗುರುತಿಸಲಾಗಿದೆ.
ಇಬ್ಬರು ಸೋದರ ಸಂಬಂಧಿಗಳು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಜಗಳವಾಡುತ್ತಿದ್ದರು. ತಡರಾತ್ರಿ ನಡೆದ ಗಲಾಟೆಯಲ್ಲಿ ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ಜಗಳದಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಹಾರಾಷ್ಟ್ರದ ಮೀರಜ್ (ಜಿಲ್ಲೆ ಸಾಂಗ್ಲಿ) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 ಕಾಮೆಂಟ್‌ಗಳು