ಹುಬ್ಬಳ್ಳಿ: ದೇವಸ್ಥಾನದ ಅರ್ಚಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಎಪಿಎಂಸಿ ಸಮೀಪದ ಈಶ್ವರ ನಗರದಲ್ಲಿ ಭಾನುವಾರ ನಡೆದಿದೆ. ಇಲ್ಲಿನ ವೈಷ್ಣೋದೇವಿ ದೇವಸ್ಥಾನದ ಅರ್ಚಕ ದೇವೇಂದ್ರಪ್ಪ ಹೊನ್ನಾಳಿ ಅವರನ್ನು ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಹಲ್ಲೆಕೋರರು ಪರಾರಿಯಾಗಿದ್ದಾರೆ. ಹತ್ಯೆಯ ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಹಂತಕರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
0 ಕಾಮೆಂಟ್‌ಗಳು