ಬೆಳಗಾವಿ: ಕರ್ತವ್ಯಲೋಪ ಆರೋಪದ ಮೇಲೆ ಚಚಡಿ ಪಿಡಿಒ (ಸೌಂದತ್ತಿ) ಅವರನ್ನು ಅಮಾನತು ಮಾಡಲಾಗಿದೆ. ಕಲುಷಿತ ನೀರಿನಿಂದ ಈ ಗ್ರಾಮದ 45ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಪಿಡಿಒ ಚಂದ್ರಶೇಖರಯ್ಯ ಹಿರೇಮಠ ಅವರನ್ನು ಅಮಾನತುಗೊಳಿಸಲಾಗಿದೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಯಶವಂತಕುಮಾರ್ ನೀಡಿದ ವರದಿ ಆಧರಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಈ ಕ್ರಮ ಕೈಗೊಂಡಿದ್ದಾರೆ.
ಚಚಡಿಯಲ್ಲಿ ವಾಂತಿ ಭೇದಿ ಪ್ರಕರಣಗಳು ಹೆಚ್ಚಿವೆ. ಕಳೆದ ಒಂದು ವಾರದಲ್ಲಿ 45ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ ಕೆಲವರು ಚಿಕಿತ್ಸೆ ಪಡೆದು ಮನೆ ತಲುಪಿದ್ದು, ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪೈಪ್‌ಲೈನ್ ಒಡೆದು ಕೊಳಚೆ ನೀರು ಕುಡಿಯುವ ನೀರಿನ ಟ್ಯಾಂಕ್‌ಗೆ ಸೇರಿದ್ದರಿಂದ ಈ ಘಟನೆ ನಡೆದಿದೆ. ಆದ್ದರಿಂದ ಸರಿಯಾಗಿ ಕರ್ತವ್ಯ ನಿರ್ವಹಿಸದ ಪಿಡಿಒಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
0 ಕಾಮೆಂಟ್‌ಗಳು