ಬೆಳಗಾವಿ: ಮಾರುತಿನಗರದ ಮಹಾವೀರ ಕಾಲೋನಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಬೆಂಕಿ ಅವಘಡದಲ್ಲಿ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಶೆಡ್‌ನಲ್ಲಿ ವಾಸವಾಗಿರುವ ಕೂಲಿಯಾಗಿರುವ ಚನ್ನಪ್ಪ ಲಮಾಣಿ ಎಂಬುವರು ತಡರಾತ್ರಿ ಮನೆಯಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ವಿಠ್ಠಲ್ ಲಮಾಣಿ ಕೂಲಿ ಕಾರ್ಮಿಕನಾಗಿ ಇಟ್ಟಿದ್ದ ಸಾವಿರಾರು ರೂಪಾಯಿ ನಗದು ಹಾಗೂ 35 ಗ್ರಾಂ ಚಿನ್ನ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
0 ಕಾಮೆಂಟ್‌ಗಳು