Hot Posts

6/recent/ticker-posts

ಬೆಳಗಾವಿ : ಕನ್ನಡ ನಾಮಫಲಕ ಅಳವಡಿಸಲು ಆದೇಶ.

 

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹೇಳಿದರು. ತೀರಾ ಅಗತ್ಯವಿದ್ದಲ್ಲಿ ಮಾತ್ರ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಮತ್ತು ಶೇ.40ರಷ್ಟು ಭಾಷೆ ಇರಲಿದೆ ಎಂದು ಹೇಳಿದರು.

ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ, 2022 ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಕಾಯಿದೆ, 2024 ಅನ್ನು ಜಾರಿಗೊಳಿಸಲಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ, 2022 ರ ಪ್ರಕಾರ, ಕನ್ನಡ ಭಾಷೆ ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳ ಅಧಿಕೃತ ಭಾಷೆಯಾಗಿದೆ. ಆದ್ದರಿಂದ ಸರ್ಕಾರಿ ಇಲಾಖೆಗಳು, ಕಮಿಷನರೇಟ್‌ಗಳು, ನಿರ್ದೇಶನಾಲಯಗಳು, ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳ ಅಧೀನದಲ್ಲಿರುವ ಎಲ್ಲಾ ವಲಯ ಇಲಾಖೆಗಳಲ್ಲಿ ಹೆಸರು, ಹುದ್ದೆ, ಸೇವಾ ಅವಧಿಯ ನಾಮಫಲಕ, ರಸ್ತೆ ಮಾರ್ಗಸೂಚಿ ಫಲಕ ಹಾಗೂ ಇತರೆ ಯಾವುದೇ ನಾಮಫಲಕಗಳನ್ನು ಕನ್ನಡದಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚನೆ ನೀಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು