ಅದರಂತೆ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತರಲು ಕ್ರಮ ಕೈಗೊಂಡಿದೆ. ಈ ಕುರಿತು ಸಂಬಂಧಪಟ್ಟ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಸೂಚನೆ ಪತ್ರ ನೀಡಲಾಗಿದೆ. ಮಂಗಳವಾರ ಅಧಿಕೃತವಾಗಿ ಆದೇಶದ ಪ್ರತಿ ನೀಡಲಾಗಿದೆ. ಸರಕಾರದ ಆದೇಶದಂತೆ ನಗರಸಭೆ ವ್ಯಾಪ್ತಿಯಲ್ಲಿ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸುವ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಬೇಕಿದೆ. ಈ ಆದೇಶವನ್ನು ಶೀಘ್ರದಲ್ಲೇ ಜಾರಿಗೊಳಿಸಬೇಕು. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕ್ರಮಕೈಗೊಳ್ಳಬೇಕಿದೆ.
ಮಾಹಿತಿ ಪ್ರಕಾರ ಜಿಲ್ಲಾಧಿಕಾರಿಗಳಿಗೂ ಸರ್ಕಾರದಿಂದ ಆದೇಶದ ಪ್ರತಿ ನೀಡಲಾಗಿದೆ. ಹೀಗಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಹೋಟೆಲ್, ಮದ್ಯ ಮಾರಾಟಗಾರರು, ವ್ಯಾಪಾರಸ್ಥರಿಗೆ ಈ ಬಗ್ಗೆ ಮಾಹಿತಿ ನೀಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಡಳಿತದ ನೆರವು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಶೀಘ್ರವೇ ಸಭೆ ನಡೆಯುವ ಸಾಧ್ಯತೆ ಇದೆ.
0 ಕಾಮೆಂಟ್‌ಗಳು