Hot Posts

6/recent/ticker-posts

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: 145 ಕಿಮೀ ಮಾನವ ಸರಪಳಿ

 

ಮೂಲಭೂತ ಹಕ್ಕುಗಳ ರಕ್ಷಣೆ ಎಂದರೆ ಪ್ರಜಾಪ್ರಭುತ್ವ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ನಾವು ವಿವಿಧತೆಯಲ್ಲಿ ಏಕತೆ ಹೊಂದಿದ್ದೇವೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ದೇಶದ ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವುದು ಮತ್ತು ರಕ್ಷಿಸುವುದು ಮತ್ತು ಅದರ ಮೌಲ್ಯಗಳನ್ನು ಪ್ರಚಾರ ಮಾಡುವುದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮುಖ್ಯ ಉದ್ದೇಶವಾಗಿದೆ.

ಇಂದು ಭಾನುವಾರ ಬೆಳಗ್ಗೆ ಸುವರ್ಣ ವಿಧಾನಸೌಧದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ರಾಮದುರ್ಗ ತಾಲೂಕಿನ ಸಾಲಹಳ್ಳಿಯಿಂದ ಕಿತ್ತೂರು ತಾಲೂಕಿನ ತೇಗೂರು ಗ್ರಾಮದವರೆಗೆ 145 ಕಿ.ಮೀ ಮಾನವ ಸರಪಳಿ ಆರಂಭಿಸಲಾಯಿತು. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮನವಿ ಮಾಡಿದರು.

 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಮಾನವೀಯ ಮೌಲ್ಯಗಳ ಸಂದೇಶ ಸಾರುವ ಈ ವಿಶ್ವ ದಾಖಲೆ ಕಾರ್ಯಕ್ರಮ ಅಭೂತಪೂರ್ವವಾಗಿದೆ. ಸಂವಿಧಾನದ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

 ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ವಿಠ್ಠಲ್ ಹಲಗೇಕರ್, ಶಾಸಕ ಆಸೀಫ್ (ರಾಜು) ಸೇಠ್, ಬುಡಾ ಅಧ್ಯಕ್ಷ ಲಕ್ಷ್ಮಣ ಚಿಂಗಳೆ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿ ಭೀಮಾಶಂಕರ ಗುಳೇದ್, ಪ್ರಾದೇಶಿಕ ಆಯುಕ್ತ ರಾಹುಲ್ ಶಿಂಧೆ, ಪ್ರಶಿಕ್ಷಣಾರ್ಥಿ ಎ.ಎ.ಎಸ್. ಅಧಿಕಾರಿ ದಿನೇಶಕುಮಾರ ಮೀನಾ, ನಗರಸಭೆ ಪೌರಾಯುಕ್ತ ಅಶೋಕ ದುಡಗುಂದಿ, ಡಿಸಿಪಿ ರೋಹನ್ ಜಗದೀಶ್, ಜಿಲ್ಲೆಯ ನಾನಾ ಸಂಘಟನೆಗಳ ಪದಾಧಿಕಾರಿಗಳು, ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ನೌಕರರು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು