Hot Posts

6/recent/ticker-posts

ಬೆಳಗಾವಿ : ಕರ್ನಾಟಕದಲ್ಲಿ ಹತ್ತಾರು ಸಿಎಂ ಹುಟ್ಟಿಕೊಂಡಿದ್ದಾರೆ: ಜಗದೀಶ್‌ ಶೆಟ್ಟರ್‌.

 ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ಹತ್ತಾರು ನಾಯಕರು ಹುಟ್ಟಿಕೊಂಡಿದ್ದಾರೆ. ಈ ಆಂತರಿಕ ಕಲಹ ಮುಂದೆ ಇನ್ನಷ್ಟು ತೀವ್ರವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಈ ಮೊದಲು ಸಿದ್ದರಾಮಯ್ಯ ಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಬ್ಬರೇ ಆಕಾಂಕ್ಷಿಯಾಗಿದ್ದರು. ಈಗ ಹತ್ತಾರು ನಾಯಕರು ಹುಟ್ಟಿಕೊಂಡಿದ್ದಾರೆ ಎಂದರು.

ಈ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಆಡಳಿತದ ಮೇಲೆ ನಿಯಂತ್ರಣ ಇಲ್ಲ. ಹೀಗಾಗಿ ಶೀಘ್ರದಲ್ಲೇ ಸರಕಾರ ಪತನವಾಗಬಹುದು ಎಂದು ಶೆಟ್ಟರ್‌ ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಸಚಿವರು ಹಾಗೂ ಶಾಸಕರು ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದ್ದೇವೆ ಎನ್ನುತ್ತಾರೆ. ಆದರೆ ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಬಹಳ ಜೋರಾಗಿ ನಡೆಯುತ್ತಿದೆ ಎಂದು ಶೆಟ್ಟರ್‌ ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು