ಬೆಳಗಾವಿ: ಚಾಕೊಲೇಟ್ ಆಮಿಷ ಒಡ್ಡಿ ಬಾಲಕನನ್ನು ಅಪಹರಿಸಲು ಯತ್ನಿಸಿರುವ ಘಟನೆ ಬೆಳಗಾವಿಯ ರಾಮದೇವ ಹೋಟೆಲ್ ಹಿಂಭಾಗದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ನೆಹರು ನಗರದ ನಿವಾಸಿ ಇಸ್ಮಾಯಿಲ್ ಮುಜಾವರ್ ಎಂಬ 7 ವರ್ಷದ ಬಾಲಕನಿಗೆ ಚಾಕಲೇಟ್ ಆಮಿಷ ಒಡ್ಡಿ ಅಪಹರಣಕ್ಕೆ ಯತ್ನಿಸಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಬೆಳಗಾವಿಯ ನೆಹರು ನಗರದ ಹೋಟೆಲ್ ರಾಮದೇವ್ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕನ ಅರಿವಿನಿಂದ ಬಾಲಕ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದಾನೆ. ಪಾಲಕರು ನೇರವಾಗಿ ಠಾಣೆಗೆ ಬಂದು ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದಾಗ, ಆ ಪ್ರದೇಶದ ಸಿಸಿಟಿವಿ ಪರಿಶೀಲಿಸಲಾಗಿದೆ. ಈ ನಡುವೆ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
0 ಕಾಮೆಂಟ್‌ಗಳು