ರಾಯಬಾಗ: ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿದ್ದಾಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೊಮನಾಳ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಕರಿಹೊಳ್ (30) ಎಂಬ ಮಹಿಳೆ ತನ್ನ ಮಕ್ಕಳಾದ ಸ್ವಾತ್ವಿಕ್ (5) ಮತ್ತು ಮುತ್ತಪ್ಪ (1) ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಯಲ್ಲವ್ವ ಮತ್ತು ಆಕೆಯ ಪತಿ ನಡುವೆ ಜಗಳವಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
0 ಕಾಮೆಂಟ್‌ಗಳು