Hot Posts

6/recent/ticker-posts

ಬೆಳಗಾವಿ: ಟೈರ್ ಒಡೆದ ಪರಿಣಾಮ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

 

ಬೆಳಗಾವಿ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶ್ರೀನಗರ ಬಳಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಔಷಧಿ ಸಮೇತ ಹೋಗುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಈ ಅಪಘಾತದಲ್ಲಿ ಲಾರಿ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕ್ಯಾಂಟರ್ ನಂ ಕೆಎ 52, ಬಿ 7247 ಹುಬ್ಬಳ್ಳಿ ಕಡೆಗೆ ಹೋಗುತ್ತಿತ್ತು. ಮುಂಭಾಗದ ಟಯರ್ ಒಡೆದು ಕ್ಯಾಂಟರ್ ಶ್ರೀನಗರ ಸೇತುವೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಘಟನೆ ನಡೆದಿದ್ದು, ಘಟನೆ ಕುರಿತು ಮಾಹಿತಿ ಪಡೆದ ಉತ್ತರ ಸಂಚಾರ ವಿಭಾಗದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು