ತರಗತಿ ಮುಗಿಸಿದ ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಬದಿ ನಿಂತಿದ್ದರು. ಈ ವೇಳೆ ಸರ್ಕಾರಿ ಬಸ್ ಮಕ್ಕಳ ಮೇಲೆ ಹರಿದಿದೆ. ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಕ್ಕಳು ರಸ್ತೆ ಬದಿ ನಿಂತಿರುವುದನ್ನು ಕಂಡರೂ ಚಾಲಕ ನಿರ್ಲಕ್ಷ ್ಯದಿಂದ ಬಸ್ ಚಲಾಯಿಸಿದ್ದಾನೆ ಎನ್ನಲಾಗಿದೆ. ಬಸ್ ಚಾಲಕನ ಬೇಜವಾಬ್ದಾರಿ ಚಾಲನೆಯಿಂದ ಬಾಲಕ ಸಾವನ್ನಪ್ಪಿದ್ದಾನೆ. ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
0 ಕಾಮೆಂಟ್‌ಗಳು