Hot Posts

6/recent/ticker-posts

ಬೆಳಗಾವಿ: ವಿದ್ಯುತ್ ಸ್ಪರ್ಶದಿಂದ ಹೆಸ್ಕಾಂ ನೌಕರ ಸಾವು.

 

ಬೆಳಗಾವಿ: ಸೌಂದತ್ತಿ ಪಟ್ಟಣದ ಜಾಕ್‌ವೆಲ್ ಬಳಿ ಮಂಗಳವಾರ ವಿದ್ಯುತ್ ಸ್ಪರ್ಶದಿಂದ ಹೆಸ್ಕಾಂ ನೌಕರರೊಬ್ಬರು ಮೃತಪಟ್ಟಿದ್ದಾರೆ. ಸುರೇಶ ಹಣಮಂತಪ್ಪ ಇಂಚಲ (46) ಮೃತರು. ದುರಸ್ತಿಗಾಗಿ ಕಂಬ ಹತ್ತುವಾಗ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬದವರು ಹಾಗೂ ಗ್ರಾಮದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಹಾಜರಾಗಬೇಕು ಎಂದು ಮೃತರ ಕುಟುಂಬಸ್ಥರು ಒತ್ತಾಯಿಸಿದರು. ಇಲ್ಲದಿದ್ದರೆ ಶವ ತೆಗೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಜಾರಿಯಲ್ಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು