ಬೆಳಗಾವಿ: ಕಾಕತಿಯಲ್ಲಿ ಭಾನುವಾರ ಮುಂಜಾನೆ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾಕತಿಯಲ್ಲಿ ನಡೆದಿದೆ. ಇದರಲ್ಲಿ ಬಾರ್ ಮ್ಯಾನೇಜರ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಡಿದ ಮತ್ತಿನಲ್ಲಿದ್ದ ಆರೋಪಿ ಸುನೀಲ ಕರಿಕಟ್ಟಿ ಬಾರ್ ಮ್ಯಾನೇಜರ್ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಕಾಕತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 ಕಾಮೆಂಟ್‌ಗಳು