ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿಗೆ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 2.73 ಕೋಟಿಯನ್ನು ಮಾಳಮಾರುತಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸರಕು ಸಾಗಣೆ ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಆರೋಪಿಗಳನ್ನೂ ಬಂಧಿಸಲಾಗಿದೆ. ಬಂಧಿತರನ್ನು ಸಚಿನ್ ಮೆಂಕುದಾಳೆ (ಸಾಂಗ್ಲಿ, ಮಹಾರಾಷ್ಟ್ರ) ಮತ್ತು ಮಾರುತಿ ಮಾರ್ಗುಡೆ ಎಂದು ಗುರುತಿಸಲಾಗಿದೆ.
ಬೆಳಗಾವಿ ಪೊಲೀಸ್ ಕಮಿಷನರ್ ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ನಂದೀಶ್ವರಕುಮಾರ್ ತಂಡ ಸಾಂಗಲಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೆ ಕೋಟ್ಯಂತರ ರೂ.ಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. ಕೂಡಲೇ ವಾಹನದಲ್ಲಿದ್ದ ಇಬ್ಬರಿಂದ 2,73,27,500 ನಗದು ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ಹಣ ಸಾಗಿಸಲು ಸರಕು ಸಾಗಣೆ ವಾಹನದ ಕ್ಯಾಬಿನ್ ತಿರುಚಿ ಹಾಕಿರುವುದು ಪತ್ತೆಯಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
0 ಕಾಮೆಂಟ್‌ಗಳು