ಬೆಳಗಾವಿ-ಖಾನಾಪುರ ರಸ್ತೆಯಲ್ಲಿ ಖಾನಾಪುರದ ಅಮಂತ್ರನ ವಸತಿಗೃಹದ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ 5 ಯುವತಿಯರನ್ನು ರಕ್ಷಿಸಲಾಗಿದ್ದು, ಈ ಪ್ರಕರಣದಲ್ಲಿ 16 ಮಂದಿಯನ್ನು ಬಂಧಿಸಲಾಗಿದೆ. ಖಾನಾಪುರ ಪೊಲೀಸ್ ಇನ್ಸ್ ಪೆಕ್ಟರ್ ಮಂಜುನಾಥ ನಾಯಕ್ ನೇತೃತ್ವದ ತಂಡ ಲಾಡ್ಜ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಯುವತಿಯರನ್ನು ರಕ್ಷಿಸಿದ್ದಾರೆ.
ಈ ಪ್ರಕರಣದಲ್ಲಿ 11 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯರನ್ನು ಮಹಿಳಾ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಿಎಸ್ ಐ ಚನ್ನಕೇಶವ ಬಾಬಲಿ, ಹೆಡ್ ಕಾನ್ ಸ್ಟೇಬಲ್ ಜೈರಾಮ್ ಹಮ್ಮನವರ, ಪೊಲೀಸ್ ಸಿಬ್ಬಂದಿ ಬಾಳಪ್ಪ ಯಲಿಗಾರವ್ ಭಾಗವಹಿಸಿದ್ದರು.
0 ಕಾಮೆಂಟ್‌ಗಳು