ಬೆಳಗಾವಿ: ನಮ್ಮ ತಂದೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಸಮಯ, ಸಂದರ್ಭ ಬರಲಿ. ಆಗ ನೋಡೋಣ ಎಂದು ಅವರ ಪುತ್ರಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎಂಟು ವರ್ಷಗಳಿಂದ ಸತೀಶ್ ಅವರು ಮುಖ್ಯಮಂತ್ರಿ ಆಗಬೇಕೆಂದು ಅವರ ಅಭಿಮಾನಿಗಳು ಅಭಿಯಾನ ನಡೆಸುತ್ತಾ ಬಂದಿದ್ದಾರೆ ಎಂದರು. ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇತ್ತೀಚೆಗೆ ಸತೀಶ್ ಭೇಟಿಯಾಗಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಅವರು ಆಗಾಗ್ಗೆ ಭೇಟಿಯಾಗುತ್ತಲೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.
0 ಕಾಮೆಂಟ್‌ಗಳು